ದೆಹಲಿ: ವಾಯು ಮಾಲಿನ್ಯ ತಡೆಯಲು ವಾಹನಗಳ ಪಾರ್ಕಿಂಗ್ ಶುಲ್ಕ ನಾಲ್ಕು ಪಟ್ಟು ಹೆಚ್ಚಳ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವುದಕ್ಕಾಗಿ ಅಧಿಕಾರಿಗಳು ವಾಹನಗಳ ಪಾರ್ಕಿಂಗ್ ಶುಲ್ಕವನ್ನು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವುದಕ್ಕಾಗಿ ಅಧಿಕಾರಿಗಳು ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚು ಮಾಡುವ ಮೂಲಕ ವಾಹನ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ನೇಮಿತ ಪರಿಸರ ಮಾಲಿನ್ಯ ತಡೆ ಮತ್ತು ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಖಾಸಗಿ ವಾಹನ ಬಳಕೆಯನ್ನು ಕಡಿಮೆ ಮಾಡುವುದಕ್ಕಾಗಿ ಪಾರ್ಕಿಂಕ್ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಲಾಗಿದೆ.
ಈ ವರ್ಷ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿದ್ದು, ತೀವ್ರ ಹೊಗೆ ಹಾಗೂ ಮಂಜಿನಿಂದಾಗಿ ಹಲವು ವಿಮಾನಗಳ ಸಂಚಾರ ವಿಳಂಬವಾಗಿದೆ ಮತ್ತು ಶಾಲಾ, ಕಾಲೇಜ್ ಗಳಿಗೂ ಇಂದು ರಜೆ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com