ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಪರಿಸರ ಸಚಿವಾಲಯದಿಂದ ಉನ್ನತ ಮಟ್ಟದ ಸಮಿತಿ ರಚನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಪರಿಸರ ಸಚಿವಾಲಯ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಪರಿಸರ ಸಚಿವಾಲಯ ಗುರುವಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚನೆ ಮಾಡಿದೆ.
ಪರಿಸರ ಸಚಿವಾಲಯದ ಕಾರ್ಯದರ್ಶಿಯ ನೇತೃತ್ವದಲ್ಲಿ ಏಳು ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಈ ಸಮಿತಿ ತಾತ್ಕಾಲಿಕ ಮತ್ತು ದೀರ್ಘಕಾಲಿಕ ಕ್ರಮಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.
ಪರಿಸರ ಸಚಿವಾಲಯದ ಕಾರ್ಯದರ್ಶಿ ಸಿ.ಕೆ.ಮಿಶ್ರಾ ಅವರು ಕೇಂದ್ರ ಮಾಲಿನ್ಯ ನಿಯಂತ್ರ ಮಂಡಳಿ ಹಾಗೂ ಸುಪ್ರೀಂ ಕೋರ್ಟ್ ನೇಮಿತ ಪರಿಸರ ಮಾಲಿನ್ಯ ತಡೆ ಮತ್ತು ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ.
ವಾಯು ಮಾಲಿನ್ಯ ಅಪಾಯದ ಮಟ್ಟಕ್ಕೇರಿದ್ದು, ಇದರ ವಿರುದ್ಧ ಕ್ಷೀಪ್ರ ಕ್ರಮ ತೆಗೆದುಕೊಳ್ಳುವಂತೆಯೂ ಪರಿಸರ ಸಚಿವಾಲಯ ದೆಹಲಿಯ ನೆರೆಯ ರಾಜ್ಯಗಳಿಗೂ ಸೂಚಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com