ದೆಹಲಿಯಲ್ಲಿ ಮತ್ತೆ ನವೆಂಬರ್ 13ರಿಂದ ಸಮ-ಬೆಸ ನಿಯಮ ಜಾರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯ ಮಿತಿ ಮೀರಿದ ಪರಿಣಾಮ ದೆಹಲಿ ಸರ್ಕಾರ ನವೆಂಬರ್ 13ರಿಂದ ನವೆಂಬರ್ 17ರ ವರೆಗೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯ ಮಿತಿ ಮೀರಿದ ಪರಿಣಾಮ ದೆಹಲಿ ಸರ್ಕಾರ ನವೆಂಬರ್ 13ರಿಂದ ನವೆಂಬರ್ 17ರ ವರೆಗೆ ಮತ್ತೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದೆ.
ಕಳೆದ ಮೂರು ದಿನಗಳಿಂದ ರಾಷ್ಟ್ರರಾಜಧಾನಿಯಲ್ಲಿ ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವುದಕ್ಕಾಗಿ ಸಮ-ಬೆಸ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ದೆಹಲಿ ಸಾರಿಗೆ ಸಚಿವ ಕೈಲಾಶ್ ಗೇಹ್ಲೋಟ್ ಅವರು ತಿಳಿಸಿದ್ದಾರೆ.
ಕಳೆದ ವರ್ಷ ಮಾಲಿನ್ಯವನ್ನು ಹತೋಟಿಗೆ ತರುವುದಕ್ಕಾಗಿ ದೆಹಲಿ ಸರ್ಕಾರ ಒಂದು ದಿನ ಸಮ ಮತ್ತು ಇನ್ನೊಂದು ದಿನ ಬೆಸ ಸಂಖ್ಯೆ ಹೊಂದಿರುವ ವಾಹನಗಳನ್ನು ಚಲಾಯಿಸುವಂತೆ ನಿಯಮ ಜಾರಿಗೊಳಿಸಿತ್ತು. ಇದೀಗ ಮೂರನೇ ಬಾರಿಗೆ ಸಮ-ಬೆಸ ನಿಯಮ ಜಾರಿಗೊಳಿಸಲಾಗುತ್ತಿದೆಯ
ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯದ ಮಟ್ಟಕ್ಕೇರಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಇಂದು ದೆಹಲಿ ಸರ್ಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಗಳನ್ನು ತೀವ್ರ  ತರಾಟೆಗೆ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಈಗ ಸಮ-ಬೆಸ ನಿಯಮ ಜಾರಿಗೆ ದೆಹಲಿ ಸರ್ಕಾರ ಮುಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com