ಭಾರತೀಯ ಸೇನೆಯಲ್ಲಿ ಶಸ್ತ್ರಾಸ್ತ್ರಗಳ ಕೊರತೆ ಇಲ್ಲ: ಜನರಲ್ ಬಿಪಿನ್ ರಾವತ್

ಭಾರತೀಯ ಸೇನಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಭಾರತೀಯ ಸೈನ್ಯದಲ್ಲಿ ಯಾವುದೇ ಶಸ್ತ್ರಾಸ್ತ್ರಗಳ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ಜನರಲ್ ಬಿಪಿನ್ ರಾವತ್
ಜನರಲ್ ಬಿಪಿನ್ ರಾವತ್
ನವದೆಹಲಿ: ಭಾರತೀಯ ಸೇನಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಭಾರತೀಯ ಸೈನ್ಯದಲ್ಲಿ ಯಾವುದೇ ಶಸ್ತ್ರಾಸ್ತ್ರಗಳ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
"ಸೈನ್ಯವು ಶಸ್ತ್ರಾಸ್ತ್ರ ಕೊರತೆಯನ್ನು ಹೊಂದಿಲ್ಲ ನಾವು ತಂತ್ರಜ್ಞಾನವನ್ನು ಬಳಸಿಕೊಂಡು ಶಸ್ತ್ರಾಸ್ತ್ರಗಳನ್ನು ನವೀಕರಿಸುತ್ತೇವೆ,  ನಮ್ಮ ಸೇನೆಯಲ್ಲಿ ಹೊಸ ಮತ್ತು ಆಧುನಿಕ ಯುದ್ಧ ತಂತ್ರಗಳನ್ನು ಅಳವಡಿಸಿಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ" ವಾರಾಣಾಸಿಯ 39, ಗೂರ್ಖಾ ತರಬೇತಿ ಕೇಂದ್ರದಲ್ಲಿನ 9 ಗೂರ್ಖಾ ರೈಫಲ್ಸ್ ನ ಬೈಸೆಂಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಜನರಲ್ ರಾವತ್ ಮಾದ್ಯಮದೊಡನೆ ಮಾತನಾಡಿದರು
ಕಾಶ್ಮೀರ ಕಣಿವೆಯಲ್ಲಿ ಕಲ್ಲು ತೂರಾಟದ ಪ್ರಕರಣಗಳು ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ "ಕಲ್ಲು ತೂರಾಟದ ಘಟನೆಗಳು ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದು, ಸೈನ್ಯ, ಗಡಿ ಭದ್ರತಾ ಪಡೆ (ಬಿಎಸ್ಎಫ್), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾಜ್ಯದಲ್ಲಿ ಒಟ್ಟಿಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ, ಗುಪ್ತಚರ ಸಂಸ್ಥೆಗಳು, ರಾಜ್ಯ ಆಡಳಿತ ಎಲ್ಲರೂ ಶಾಂತಿ ಕಾಪಾಡುವ ಪ್ರಯತ್ನಗಳನ್ನು ಮಾಡುತ್ತಿವೆ" ಎಂದು ಅವರು ಹೇಳಿದ್ದಾರೆ.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಅವರಿಗೆ ಭಾರತ ರತ್ನ ನೀಡುವುದರ ಬಗೆಗೆ ಮಾತನಾಡಿದ ರಾವತ್, " ಅಂತಿಮ ತೀರ್ಮಾನವೇನಿದ್ದರೂ ಸರ್ಕಾರಕ್ಕೆ ಬಿಟ್ಟಿದ್ದು" ಎಂದಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com