ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ: ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀದಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಚಾರ ಸಂಬಂಧ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ದೆಹಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಮುಖಂಡ ಮತ್ತು ವಕೀಲರಾಗಿರುವ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅಲ್ಪಸಂಖ್ಯಾತರ ಹಕ್ಕುಗಳನ್ನು ಬಹುಸಂಖ್ಯಾತರು "ಕಾನೂನುಬಾಹಿರವಾಗಿ ಮತ್ತು ನಿರಂಕುಶವಾಗಿ" ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದ್ದು  ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವಾಗಲೀ ಹಿಂದೂಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತರ ಕಾಯ್ದೆ 1992 ರ ಅಡಿಯಲ್ಲಿ 'ಅಲ್ಪಸಂಖ್ಯಾತ' ಎಂದು ಸೂಚಿಸಿಲ್ಲ. ಆದರೆ ಲಕ್ಷದ್ವೀಪ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಪಂಜಾಬ್ ಗಳಲ್ಲಿ ಹಿಂದೂ ಸಮುದಾಯ ಅಲ್ಪಸಂಖ್ಯಾತವಾಗಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com