123 ಕೈಗಾರಿಕಾ ಯುನಿಟ್ ನ ಕಾಮಗಾರಿ ಸ್ಥಗಿತಕ್ಕೆ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶ

8 ಸಕ್ಕರೆ ಮಿಲ್ ಸೇರಿದಂತೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿರುವ 123 ಕೈಗಾರಿಕಾ ಯುನಿಟ್ ನಲ್ಲಿನ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಅಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಜಾಫರ್ ನಗರ: 8 ಸಕ್ಕರೆ ಮಿಲ್ ಸೇರಿದಂತೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿರುವ 123 ಕೈಗಾರಿಕಾ ಯುನಿಟ್ ನಲ್ಲಿನ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಅಲ್ಲಿನ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. 
ನ.14 ರ ವರೆಗೆ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ. ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿತ್ತು. 
ಮಾಲಿನ್ಯವನ್ನು ತಡೆಗಟ್ಟಲು ಈಗಾಗಲೇ 10-15 ವರ್ಷದ ಹಿಂದಿನ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com