ಸುಖೋಯ್ ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿ ಉಡಾವಣೆಗೆ ಸಿದ್ಧತೆ

ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯನ್ನು ಸುಖೋಯ್ ಜೆಟ್ ನಿಂದ ಪರೀಕ್ಷಾರ್ಥ ಉಡಾವಣೆ ಮಾಡುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಬ್ರಹ್ಮೋಸ್
ಬ್ರಹ್ಮೋಸ್
ನವದೆಹಲಿ: ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯನ್ನು ಸುಖೋಯ್ ಜೆಟ್ ನಿಂದ ಪರೀಕ್ಷಾರ್ಥ ಉಡಾವಣೆ ಮಾಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. 
ಶತ್ರು ಪಡೆಯ ಪ್ರದೇಶದ ಮೇಲೆ ಪರಿಣಾಮಕಾರಿ ದಾಳಿ ನಡೆಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಸುಖೋಯ್ ಜೆಟ್ ನಿಂದ ಕ್ಷಿಪಣಿ ಉಡಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಕ್ರೂಸ್ ಕ್ಷಿಪಣಿಯನ್ನು ಭಾರತದಲ್ಲಿ ಜೆಟ್ ವಿಮಾನದ ಮೂಲಕ ಉಡಾವಣೆ ಮಾಡಲಾಗುತ್ತಿದೆ.   
ಸುಖೋಯ್ ಜೆಟ್ 3,200 ಕಿಮೀ ವ್ಯಾಪ್ತಿಯನ್ನು ಹೊಂದಿದ್ದು, ಬ್ರಹ್ಮೋಸ್-ಸುಖೋಯ್ ಸಂಯೋಜನೆ ಭಾರತೀಯ ಸೇನೆಗೆ ಹೊಸ ಸಾಮರ್ಥ್ಯ ತಂದುಕೊಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ವಿಸಿಬಲಿಟಿ ವ್ಯಾಪ್ತಿಯನ್ನೂ ಮೀರಿ ಶತ್ರು ಪಡೆಯ ಮೇಲೆ ದಾಳಿ ನಡೆಸಲು ಇದರಿಂದ ಸಾಧ್ಯವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com