ಈ ಹಿಂದೆ ವರದಿಯಾದಂತೆ ನವೆಂಬರ್ ಅಂತ್ಯದಲ್ಲಿ ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಪಟ್ಟ ನೀಡಲು ನಿರ್ಧರಿಸಲಾಗಿತ್ತು. ಆದರೆ ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತಾದರೂ, ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇರುವುದರಿಂದ ರಾಹುಲ್ ಗಾಂಧಿ ಅವರನ್ನು ಸಧ್ಯಕ್ಕೆ ಅಧ್ಯಕ್ಷ ಗಾದಿಗೇರಿಸಲು ಹಿಂದೇಟು ಹಾಕಲಾಗುತ್ತಿದೆ.