ಸಂಗ್ರಹ ಚಿತ್ರ
ದೇಶ
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ...
ಕುಲ್ಗಾಮ್; ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಕುಲ್ಗಾಮ್ ಜಿಲ್ಲೆ ನೌಗಾಮ್ ಕುಂದ್, ಖ್ವಾಜಿಗುಂದ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ಕುಲ್ಗಾಮ್ ಜಿಲ್ಲೆಯ ವಿಶೇಷ ಕಾರ್ಯಾಚರಣಾ ಪಡೆ ಹಾಗೂ ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ.
ಸೇನಾ ಪಡೆ ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಅಡಗಿ ಕುಳಿತಿರುವ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. ಉಗ್ರರ ವಿರುದ್ಧ ಇದೀಗ ಸೇನಾಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ತ್ರಾಲ್'ನ ಅವಂತಿಪೊರಾ ಜಿಲ್ಲೆಯ ಲಾಮ್ ಅರಣ್ಯ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, 42 ರಾಷ್ಟ್ರೀ ರೈಫಲ್ಸ್ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ