ನೋಯ್ಡಾ: ಭಾರತೀಯ ಜನತಾಪಕ್ಷ(ಬಿಜೆಪಿ)ದ ಮುಖಂಡ ಮತ್ತು ಟಿಗ್ರಿ ಗ್ರಾಮದ ಮುಖ್ಯಸ್ಥ ಶಿವ ಕುಮಾರ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಶಿವ ಕುಮಾರ್ ತಮ್ಮ ಫಾರ್ಚೂನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಶಿವ ಕುಮಾರ್ ಮತ್ತು ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.