ಕಾಶ್ಮೀರದಲ್ಲಿ ಉಗ್ರ ದಾಳಿ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದ ಝಕುರ ಪ್ರದೇಶದಲ್ಲಿ ಶುಕ್ರವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು,....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದ ಝಕುರ ಪ್ರದೇಶದಲ್ಲಿ ಶುಕ್ರವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದು, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದ ಮೂವರು ಉಗ್ರರು ಝಕುರ ಕ್ರಾಸಿಂಗ್ ಬಳಿ ಪೊಲೀಸ್ ತಂಡದ ಮೇಲೆ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಇಮ್ರಾನ್ ಟಕ್ ಹುತಾತ್ಮರಾಗಿದ್ದು, ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಉಗ್ರರು ಪ್ರಯಾಣಿಸುತ್ತಿದ್ದ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದು, ಓರ್ವ ಉಗ್ರನನ್ನು ಬಂಧಿಸಿದ್ದಾರೆ. ಆದರೆ ಇತರೆ ಇಬ್ಬರು ತಪ್ಪಿಸಿಕೊಂಡಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com