ರಾಫೆಲ್ ಡೀಲ್: ಕಾಂಗ್ರೆಸ್ ಆರೋಪಕ್ಕೆ ರಿಜಿಜು ತಿರುಗೇಟು

ರಾಫೆಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಲು ಮುಂದಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ತಿರುಗೇಟು ನೀಡಿ...
ಕಿರಣ್ ರಿಜಿಜು
ಕಿರಣ್ ರಿಜಿಜು
Updated on: 
ನವದೆಹಲಿ: ರಾಫೆಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಲು ಮುಂದಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ತಿರುಗೇಟು ನೀಡಿದ್ದು, ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಭಾರತೀಯ ರಕ್ಷಣಾ ಪಡೆಗಳ ಸಾಮರ್ಥ್ಯ ಹೆಚ್ಚಿಸುವಲ್ಲಿ ಬೇಜವಾಬ್ದಾರಿಯುತವಾಗಿ ವರ್ತಿಸಿತ್ತು ಎಂದು ಆರೋಪಿಸಿದ್ದಾರೆ. 
ಕಳೆದ 5 ದಶಕಗಳು ಆಡಳಿತ ನಡೆಸಿರುವ ಪಕ್ಷವೊಂದು ಈ ಮಟ್ಟಕ್ಕೆ ಬೇಜವಾಬ್ದಾರಿತನ ತೋರಬಹುದೇ? ಎಂದು ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. 36 ರಾಫೆಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಕೇಂದ್ರ ಸರ್ಕಾರ 58,000 ಕೋಟಿ ರೂಪಾಯಿಗಳನ್ನು ಪಾವತಿಸುವ ಒಪ್ಪಂದ ಮಾಡಿಕೊಂಡಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು, ಈ ಹಿನ್ನೆಲೆಯಲ್ಲಿ ರಿಜಿಜು ಟ್ವಿಟರ್ ನಲ್ಲಿ ಕಾಂಗ್ರೆಸ್ ನ್ನು ಟೀಕಿಸಿದ್ದಾರೆ. 
ಒಂದು ರಾಫೆಲ್ ಜೆಟ್ ಖರೀದಿಗೆ ಯುಪಿಎ ಸರ್ಕಾರ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದ ಮೊತ್ತಕ್ಕಿಂತ 10 ರಷ್ಟು ಹೆಚ್ಚು ಮೊತ್ತವನ್ನು ಈಗಿನ ಸರ್ಕಾರ ಪಾವತಿ ಮಾಡಲು ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ಭಾರತೀಯ ವಾಯುಪಡೆ ಮುಖ್ಯಸ್ಥ ಬಿರೇಂದರ್ ಸಿಂಗ್ ದನೋಹಾ ಈ ವಾದವನ್ನು ತಳ್ಳಿಹಾಕಿದ್ದು, ಹಿಂದಿನ ಸರ್ಕಾರಕ್ಕಿಂತ ಈ ಸರ್ಕಾರದ ಒಪ್ಪಂದ ಉತ್ತಮವಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com