ಸಾಕ್ಷಿ ಹೇಳುವವರ ಸುರಕ್ಷತೆ ಕ್ರಮ ಕೈಗೊಳ್ಳಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶ

ಅಸರಮ್ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಸಾಕ್ಷಿದಾರರ ಮೇಲೆ ಹಲ್ಲೆ ನಡೆದ ಘಟನೆಯನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಅಸರಮ್ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಸಾಕ್ಷಿದಾರರ ಮೇಲೆ ಹಲ್ಲೆ ನಡೆದ ಘಟನೆಯನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್, ಸೂಕ್ಷ್ಮ ಪ್ರಕರಣಗಳಲ್ಲಿ ಸಾಕ್ಷಿದಾರರ ಸುರಕ್ಷತೆಗೆ ಸೂಕ್ತ ಕಾರ್ಯವಿಧಾನವನ್ನು ಜಾರಿಗೆ ತರಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ.
ಪ್ರಕರಣಗಳಲ್ಲಿ ಸಾಕ್ಷಿದಾರರ ಮೇಲೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿರುವುದನ್ನು ಮನಗಂಡಿರುವ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಸಾಕ್ಷಿ ರಕ್ಷಣೆ ಕಾರ್ಯಕ್ರಮವನ್ನು ರಚಿಸಬೇಕೆಂದು  ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಅಸರಮ್ ಕೇಸಿನ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಈ ಆದೇಶ ನೀಡಿದೆ.
ಕೆಳ ಹಂತದ ನ್ಯಾಯಾಲಯಗಳಲ್ಲಿ  ವಿಚಾರಣೆ ಇನ್ನೂ ನಡೆಯುತ್ತಿರುವಾಗ ಸಾಕ್ಷಿದಾರರಿಗೆ ಭದ್ರತೆ ಒದಗಿಸುವುದು ಕಡಿಮೆಯಾಗುತ್ತದೆ ಎಂದು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಈ ಆದೇಶ ನೀಡಿದೆ. 
ವಿವಾದಿತ ಸ್ವಘೋಷಿತ ದೇವಮಾನವ ಅಸರಮ್ ಬಾಪು ಮತ್ತು ಅವರ ಪುತ್ರ ನಾರಾಯಣ್ ಸಾಯಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಳೆದ 4 ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com