ಜಿಎಸ್'ಟಿಗೆ ಕಾಂಗ್ರೆಸ್ ಬೆಂಬಲವಿತ್ತು ಆದರೆ, ಅದರ ಅನುಷ್ಠಾನದ ಪರಿಗೆ ಅಲ್ಲ: ಮಾಜಿ ಪ್ರಧಾನಿ ಸಿಂಗ್

ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ)ನ್ನು ಕಾಂಗ್ರೆಸ್ ಬೆಂಬಲಿಸಿತ್ತು. ಆದರೆ, ಅದನ್ನು ಜಾರಿಗೆ ತಂದ ರೀತಿಯನ್ನಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರು ಶನಿವಾರ...
ಮಾಜಿ ಪ್ರಧಾನಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್
ಮಾಜಿ ಪ್ರಧಾನಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್
Updated on: 
ಕೊಚ್ಚಿ: ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ)ನ್ನು ಕಾಂಗ್ರೆಸ್ ಬೆಂಬಲಿಸಿತ್ತು. ಆದರೆ, ಅದನ್ನು ಜಾರಿಗೆ ತಂದ ರೀತಿಯನ್ನಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ. 
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೊಚ್ಚಿಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಅವರು, ಜಿಎಸ್'ಟಿ ಕೇವಲ ಒಂದು ಕಲ್ಪನೆಯಾಗಿದ್ದು, ಅದಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲವಿತ್ತು. ಸಾಕಷ್ಟು ಸಿದ್ಧತೆ ಹಾಗೂ ಎಚ್ಚರಿಕೆಗಳನ್ನು ತೆಗೆದುಕೊಂಡ ಬಳಿಕವೇ ಅದನ್ನು ನಾವು ಜಾರಿಗೆ ತರುತ್ತಿದ್ದೆವು ಎಂದು ಹೇಳಿದ್ದಾರೆ. 
ಇದೇ ವೇಳೆ ಕೇಂದ್ರ ಸರ್ಕಾರದ ನೋಟು ನಿಷೇಧದ ವಿರುದ್ಧ ಕಿಡಿಕಾರಿರುವ ಅವರು, ನೋಟು ನಿಷೇಧವೊಂದು ಐತಿಹಾಸಿಕ ತಪ್ಪು. ಸಾಕಷ್ಟು ಭರವಸೆಗಳನ್ನು ನೀಡುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ, ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. 
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೆಟ್ಟ ನೀತಿಗಳ ವಿರುದ್ಧ ಹೋರಾಡಲು ಎಡ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಬೇಕು. ಪಕ್ಷದ ನಾಯಕರೂ ಕೂಡ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದೊಂದಿಗೆ ಸಹಕಾರ ನೀಡಬೇಕು. ಬಿಜೆಪಿ ಕೆಟ್ಟ ನೀತಿ ಹಾಗೂ ಒಡಕು ನೀತಿಗಳ ವಿರುದ್ಧ ಹೋರಾಡಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com