ಜಮ್ಮು-ಕಾಶ್ಮೀರ: 6 ಉಗ್ರರ ಹತ್ಯೆ, ಓರ್ವ ಕಮಾಂಡೋ ಹುತಾತ್ಮ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ 5 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಕಮಾಂಡೋ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ
ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ 6 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಕಮಾಂಡೋ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. 
ಬಂಡಿಪೋರಾ ಜಿಲ್ಲೆಯಲ್ಲಿ ಗುಂಡಿನ ಕಾಳಗ ನಡೆದಿದ್ದು, ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ದಾಳಿ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಮಾಹಿತಿ ನೀಡಿದ್ದಾರೆ. 
ರಾಷ್ಟ್ರೀಯ ರೈಫಲ್ಸ್(ಆರ್ ಆರ್) ವಿಶೇಷ ಕಾರ್ಯ ಪಡೆ (ಎಸ್ಒಜಿ) ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com