ಫಾರೂಖ್ ಅಬ್ದುಲ್ಲಾ ದೇಶವನ್ನು ಕೋಮುವಾದದೆಡೆಗೆ ತಳ್ಳುತ್ತಿದ್ದಾರೆ: ಬಿಜೆಪಿ

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ವಿರುದ್ಧ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ದೇಶವನ್ನು ಕೋಮುವಾದದೆಡೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.
ಫಾರೂಖ್ ಅಬ್ದುಲ್ಲಾ
ಫಾರೂಖ್ ಅಬ್ದುಲ್ಲಾ
Updated on: 
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ವಿರುದ್ಧ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ದೇಶವನ್ನು ಕೋಮುವಾದದೆಡೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದೆ. 
ಎಎನ್ಐ ನೊಂದಿಗೆ ಮಾತನಾಡಿರುವ ಬಿಜೆಪಿ ಮುಖಂಡ ಗೋಪಾಲ ಕೃಷ್ಣ ಅಗರ್ವಾಲ್, ಫಾರೂಖ್ ಅಬ್ದುಲ್ಲಾ ಓರ್ವ ಸಂಸದರಾಗಿದ್ದು ಸಂಸದೀಯ ಕಾನೂನಿನ ಪ್ರಕಾರ ಹೇಳಿಕೆ ನೀಡುವುದು ಸೂಕ್ತ ಎಂದು ಹೇಳಿದ್ದಾರೆ. 
ಫಾರೂಖ್ ಅಬ್ದುಲ್ಲಾ ಯಾವ ಚಿಂತನೆ ಹೊಂದಿದ್ದಾರೆ, ಯಾವ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂಬುದನ್ನು ಅರಿಯಲು ಸಾಧ್ಯವಾಗುತ್ತಿಲ್ಲ. ಅವರು ದೇಶವನ್ನು ಕೋಮುವಾದದೆಡೆಗೆ ತಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಇದಕ್ಕೂ ಮುನ್ನ  ಬಿಜೆಪಿ ವಿರುದ್ಧ ಆರೋಪ ಮಾಡಿದ್ದ ಫಾರೂಖ್ ಅಬ್ದುಲ್ಲಾ ಬಿಜೆಪಿ ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com