ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್
ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್'ಗೆ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರಿಗೆ 2017ನೇ ಸಾಲಿನ ಇಂದಿರಾ ಗಾಂಧಿ ಶಾಂತಿ, ನಿಶ್ಯಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ...
ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರಿಗೆ 2017ನೇ ಸಾಲಿನ ಇಂದಿರಾ ಗಾಂಧಿ ಶಾಂತಿ, ನಿಶ್ಯಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನೇತೃತ್ವದ ತೀರ್ಪುಗಾರರ ಸಮಿತಿಯು ಮನಮೋಹನ್ ಸಿಂಗ್ ಅವರಿಗೆ ಇಂದಿರಾ ಗಾಂಧಿ ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿದೆ. 
ಇಂದಿರಾಗಾಂಧಿ ಪ್ರಶಸತಿಯನ್ನು ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ವಾರ್ಷಿಕವಾಗಿ ನೀಡಲಾಗುತ್ತದೆ. ಅಂತರಾಷ್ಟ್ರೀಯ ಶಾಂತಿ, ಅಭಿವೃದ್ಧಿ, ಮತ್ತು ಆರ್ಥಿಕ ಕ್ರಮವನ್ನು ಉತ್ತೇಜಿಸುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಯೂ ರೂ.25 ಲಕ್ಷ ನಗದು ಹಾಗೂ ಪ್ರಮಾಣ ಪತ್ರವನ್ನು ಹೊಂದಿರುತ್ತದೆ. 
ಮನಮೋಹನ್ ಸಿಂಗ್ ಅವರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆಯನ್ನು ಹೆಚ್ಚಿಸಿ, ನೆರೆಯ ದೇಶಗಳ ಜತೆಗೆ ಮತ್ತು ವಿಶ್ವದ ಪ್ರಮುಖ ದೇಶಗಳ ಜೊತೆ ಹೊಂದಿದ್ದ ಉತ್ತಮ ಬಾಂಧವ್ಯವನ್ನು ಕೂಡಾ ಪರಿಗಣಿಸಲಾಗಿದೆ. ಎಲ್ಲಕ್ಕಿಂತಲೂ ಹೆಚ್ಚಾಗಿ ನಂಬಿಕೆ, ಜಾತಿ, ಧರ್ಮ ಅಥವಾ ಭಾಷೆಯ ಭೇದವಿಲ್ಲದೇ ಎಲ್ಲಾ ಜನಸಾಮಾನ್ಯರ ಭದ್ರತೆ ಮತ್ತು ಕಲ್ಯಾಣಕ್ಕೆ ಅವರು ಹೊಂದಿದ್ದ ಬದ್ತೆ ಮುಖ್ಯವಾದದ್ದು ಎಂದು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಕಾರ್ಯದರ್ಶಿ ಸುಮರ್ ದುಬೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com