'ಮೋದಿಯಿಂದ ಮುಂದಿನ ವರ್ಷ ಲೋಕಸಭಾ ಚುನಾವಣೆ ಘೋಷಿಸುವ ಸಾಧ್ಯತೆ'

ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನು ವಿಸರ್ಜಿಸಿ ಅವಧಿಪೂರ್ವ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 
ಪಾಟ್ನ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನು ವಿಸರ್ಜಿಸಿ ಅವಧಿಪೂರ್ವ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 
2019 ರ ಬದಲಾಗಿ 2018 ಕ್ಕೇ ಮೋದಿ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಆದ್ದರಿಂದ ಪಕ್ಷದ ಕಾರ್ಯಕರ್ತರು ಸಜ್ಜುಗೊಂಡಿರುವಂತೆ ಲಾಲು ಪ್ರಸಾದ್ ಕರೆ ನೀಡಿದ್ದಾರೆ. ಯಾವುದೇ ಸಮಯದಲ್ಲಿ ಲೋಕಸಭಾ ಚುನಾವಣೆ ನಡೆದರೂ ಬಿಜೆಪಿಯನ್ನು ಎದುರಿಸಲು ಎಲ್ಲಾ ಪ್ರತಿಪಕ್ಷಗಳೂ ಒಗ್ಗೂಡಬೇಕು ಎಂದು ಲಾಲು ಪ್ರಸಾದ್ ಹೇಳಿದ್ದಾರೆ. 
ಇದೇ ವೇಳೆ ಗೋರಕ್ಷಕರು ಗೋ ರಕ್ಷಣೆ ಹೆಸರಿನಲ್ಲಿ ಜನರಿಗೆ ಥಳಿಸುತ್ತಿರುವ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನೂ ಟೀಕಿಸಿರುವ ಲಾಲು ಪ್ರಸಾದ್, ಈ ಹಿಂದೆಲ್ಲಾ ಜನರು ಸಿಂಹಗಳನ್ನು ನೋಡಿದರೆ ಹೆದರುತ್ತಿದ್ದರು, ಈಗ ಹಸುಗಳನ್ನು ನೋಡಿದರೂ ಹೆದರುವ ಪರಿಸ್ಥಿತಿ ಉಂಟಾಗಿದೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com