ಹೀಗಾಗಿ ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿರುವಂತೆ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಸ್ತಾಪ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಅದರಂತೆ ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಾರಥಿಯಾಗಿದ್ದ ಸೋನಿಯಾಗಾಂಧಿ ಅವರು ನಾಳೆ ರಾಹುಲ್ ಗಾಂಧಿ ಅವರಿಗೆ ತಮ್ಮ ಜವಾಬ್ದಾರಿಯನ್ನು ನೀಡಲಿದ್ದಾರೆ.