ಪಶ್ಚಿಮ ಬಂಗಾಳ: ಬಿಸಿಯೂಟದಲ್ಲಿ ಹಲ್ಲಿ ಪತ್ತೆ- 87 ಮಕ್ಕಳು ಆಸ್ಪತ್ರೆಗೆ ದಾಖಲು

ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ 87 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೋಲ್ಕತಾ: ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ 87 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 
ಬಂಕುರ ಜಿಲ್ಲೆಯ ಮಂದರ್ಮನಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಮಕ್ಕಳಿಗೆ ಬಿಸಿಯೂಟವನ್ನು ನೀಡಲಾಗಿದೆ. ಈ ವೇಳೆ ವಿದ್ಯಾರ್ಥಿಯೊಬ್ಬನ ಆಹಾರದಲ್ಲಿ ಹಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. 
ಆಹಾರದಲ್ಲಿ ಹಲ್ಲಿ ಬಿದ್ದಿರುವುದು ಕಂಡ ಕೂಡಲೇ ಸ್ಥಳದಲ್ಲಿ ಸಾಕಷ್ಟು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಜಿಲ್ಲಾ ಆಡಳಿತ ಮಂಡಳಿ ಹಾಗೂ ಶಾಲಾ ಆಡಳಿತ ಮಂಡಳಿಯ ಆಧಿಕಾರಿಗಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದರು. ಘಟನೆಯಲ್ಲಿ ಯಾವುದೇ ಮಕ್ಕಳ ಸ್ಥಿತಿ ಗಂಭೀರವಾಗಿಲ್ಲ ಎಂದು ಅಧಿಕಾರಿ ಮೊನಿರುಲ್ ಇಸ್ಲಾಂ ಅವರು ಹೇಳಿದ್ದಾರೆ. 
ಚಿಕಿತ್ಸೆ ಬಳಿಕ 2-3 ಮಕ್ಕಳನ್ನು ಬಿಟ್ಟು ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. 2-3 ಮಕ್ಕಳಿಗೆ ಮಾತ್ರ ರಾತ್ರಿಯಿಡೀ ಚಿಕಿತ್ಸೆ ನೀಡಿ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com