ಕಾಶ್ಮೀರ ಕಣಿವೆಯಲ್ಲಿ ಪ್ರಸಕ್ತ ವರ್ಷ 190 ಉಗ್ರರ ಹತ್ಯೆ: ಭಾರತೀಯ ಸೇನೆ

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪ್ರಸಕ್ತ ವರ್ಷ 190 ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಈಗಲೂ 200 ಉಗ್ರರು ತಲೆಮರೆಸಿಕೊಂಡಿದ್ದಾರೆಂದು ಭಾರತೀಯ ಸೇನೆ ಭಾನುವಾರ ಮಾಹಿತಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೇನೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನಿನ್ನೆ ಮಾತನಾಡಿರುವ ಲೆಫ್ಟಿನೆಂಟ್ ಜನರಲ್ ಜೆ.ಎಸ್. ಸಂಧು ಅವರು, ಉಗ್ರರ ವಿರುದ್ಧ ಈ ವರ್ಷ ಸೇನಾ ಪಡೆ ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ವರೆಗೂ 190 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.
2017ರಲ್ಲಿ ಇದೂವರೆಗೂ 80 ಸ್ಥಳೀಯ ಉಗ್ರರು ಮತ್ತು 110 ವಿದೇಶಿ ಉಗ್ರರನ್ನು ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಪೈಕಿ 66 ಉಗ್ರರನ್ನು ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮ ಒಳನುಸುಳುವಿಕೆ ಸಂದರ್ಭದಲ್ಲಿ ಹೊಡೆದುರುಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಶ್ಮೀರವನ್ನು ಉಗ್ರರ ತವರು ಮಾಡಲು ಪಾಕಿಸ್ತಾನದ ಉಗ್ರ ಸಂಘಟನೆಗಳು ಈ ಹಿಂದಿನಿಂದಲೂ ಯತ್ನ ನಡೆಸುತ್ತಿವೆ. ಆದರೆ, 125-130 ಉಗ್ರರನ್ನು ಹತ್ಯೆ ಮಾಡುವ ಮೂಲಕ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿಯಲ್ಲಿ ಗಣನೀಯ ಬದಲಾವಣೆಗಳನ್ನು ತರಲಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


