ಗುಜರಾತ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಎನ್ ಸಿಪಿ ಸ್ಪಷ್ಟನೆ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಸ್ಪಷ್ಟಪಡಿಸಿದೆ.
ಎನ್ ಸಿಪಿ
ಎನ್ ಸಿಪಿ
ಅಹಮ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಸ್ಪಷ್ಟಪಡಿಸಿದೆ. 
ಈ ಹಿಂದೆ ಕಾಂಗ್ರೆಸ್ ಗೆ ಬೆಂಬಲ ನೀಡುವ ಸುಳಿವು ನೀಡಿದ್ದ ಎನ್ ಸಿಪಿ ಈಗ ಯಾವುದೇ ಮೈತ್ರಿಯ ಹೊರತಾಗಿಯೂ ಗುಜರಾತ್ ನಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದೆ. 
ಕಾಂಗ್ರೆಸ್ ಪಕ್ಷ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಎನ್ ಸಿಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ನಿರ್ಧರಿಸಿದೆ. 
ಪ್ರಾರಂಭದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿದ್ದೆವು, ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆಯೂ ನಡೆದಿತ್ತು. ಆದರೆ ಕಾಂಗ್ರೆಸ್ ತನ್ನ ನಿರ್ಧಾರ ಪ್ರಕಟಿಸಲು ವಿಳಂಬ ಮಾಡುತ್ತಿತ್ತು, ಈ ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಎನ್ ಸಿ ಪಿ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com