ಪದ್ಮಾವತಿ ವಿವಾದ: 'ಆಕ್ಷೇಪಾರ್ಹ' ದಶ್ಯಕ್ಕೆ ಕತ್ತರಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮ 'ಪದ್ಮಾವತಿ' ಚಿತ್ರದ ಆಕ್ಷೇಪಾರ್ಹ....
ನವದೆಹಲಿ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮ 'ಪದ್ಮಾವತಿ' ಚಿತ್ರದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಪದ್ಮಾವತಿ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್‌ಸಿ) ಇನ್ನು ಅನುಮತಿಯೇ ನೀಡಿಲ್ಲ. ಹೀಗಾಗಿ ನಾವು ಈಗ ಮಧ್ಯ ಪ್ರವೇಶಿಸಿದರೆ ಪೂರ್ವ-ನಿರ್ಧರಿತವಾಗುತ್ತದೆ ಎಂದು ಹೇಳಿ ಅರ್ಜಯನ್ನು ವಜಾಗೊಳಿಸಿದ್ದಾರೆ.
ಸಿಬಿಎಫ್‌ಸಿ ಅನುಮತಿ ನೀಡದಿದ್ದರೂ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ರಾಣಿ ಪದ್ಮಾವತಿಯ ಅವಹೇಳನ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಎಂ ಎಲ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com