ತಮ್ಮ ಪುತ್ರಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಡಿ.2 ರಿಂದ ಡಿ.10 ರ ವರೆಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ಗೆ ಕಾರ್ತಿ ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಡಿ.10 ರೊಳಗೆ ವಾಪಸ್ ಬಾರದೇ ಇದ್ದರೆ ಅದನ್ನು ನ್ಯಾಯಾಂಗ ಉಲ್ಲಂಘನೆಯೆಂದು ಪರಿಗಣಿಸಲಾಗುತ್ತದೆ ಎಂದು ಕಾರ್ತಿ ಚಿದಂಬರಂ ಗೆ ಕೋರ್ಟ್ ಎಚ್ಚರಿಕೆ ನೀಡಿದೆ.