ಮೋದಿ ಬ್ರಹ್ಮ, ಸೃಷ್ಟಿಕರ್ತ, ಸಂಸತ್ ಅಧಿವೇಶನ ಯಾವಾಗ ಅಂತ ಅವರಿಗೇ ಗೊತ್ತು: ಖರ್ಗೆ

ಸಂಸತ್ ಚಳಿಗಾಲದ ಅಧಿವೇಶನವನ್ನು ಮುಂದೂಡುತ್ತಿರುವ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ....
ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ, ಗುಲಾಂನಬಿ ಆಜಾದ್
ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ, ಗುಲಾಂನಬಿ ಆಜಾದ್
Updated on: 
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನವನ್ನು ಮುಂದೂಡುತ್ತಿರುವ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ಪ್ರಧಾನಿ ನರೇಂದ್ರ ಮೋದಿ ಬ್ರಹ್ಮ, ಸೃಷ್ಟಿಕರ್ತ... ಸಂಸತ್ತಿನ ಅಧಿವೇಶನ ಯಾವಾಗ ಆರಂಭವಾಗುತ್ತದೆ ಎಂಬುದು ಅವರಿಗೆ ಮಾತ್ರ ಗೊತ್ತಿರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿ ಮಾತನಾಡಿದ ಖರ್ಗೆ, ಗುಜರಾತ್‌ ವಿಧಾನಸಭಾ ಚುನಾವಣೆ ಇರುವುದರಿಂದ ಪ್ರತಿಪಕ್ಷಗಳಿಂದಾಗುವ ಮುಜಗರ ತಪ್ಪಿಸಿಕೊಳ್ಳಲು ಚಳಿಗಾಲದ ಅಧಿವೇಶನವನ್ನು ಮುಂದೂಡಲಾಗುತ್ತಿದೆ ಎಂದು ಆರೋಪಿಸಿದರು.
ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ‘ದೇವಾಲಯ’ವನ್ನು ಧ್ವಂಸ ಮಾಡುತ್ತಿದ್ದಾರೆ. ಮೋದಿ ಅವರು ಸಂಸತ್ ಭವನದ ಹೊಸ್ತಿಲನ್ನು ಮುಟ್ಟಿ, ನಮಸ್ಕರಿಸಿಕೊಂಡು ಒಳಗೆ ಕಾಲಿರಿಸಿದ್ದರು. ಆದರೆ ಮೋದಿ ಈಗ ಸಂಸತ್ತಿಗೆ ಗೌರವವನ್ನೇ ನೀಡುತ್ತಿಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ಆಡಳಿತ ನಡೆಸಬೇಕು ಎಂದು ಜನ ನಿರೀಕ್ಷಿಸುತ್ತಾರೆ. ಆದರೆ ಮೋದಿ ಸಂಪುಟ ಸದಸ್ಯರು ‘ಪ್ರಚಾರಕ ಯಂತ್ರ’ಗಳಂತೆ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು.
ಈ ವೇಳೆ ಮಾತನಾಡಿದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂನಬಿ ಆಜಾದ್ ಅವರು, ಕೇಂದ್ರ ಸರ್ಕಾರ ತನ್ನ ಭ್ರಷ್ಟಾಚಾರ ಮತ್ತು ವೈಫಲ್ಯಗಳಿಂದ ತಪ್ಪಿಸಿಕೊಳ್ಳಲು ಸಂಸತ್ ಕಲಾಪ ಮುಂದೂಡುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com