10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯ ನಗರಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಉತ್ತೇಜನಕ್ಕೆ ಕೇಂದ್ರ ಮುಂದು

ಏರಿಕೆಯಾಗುತ್ತಿರುವ ಮಾಲಿನ್ಯದ ಬಗ್ಗೆ ಆತಂಕಗೊಂಡಿರುವ ಕೇಂದ್ರ ಸರ್ಕಾರ 10 ಲಕ್ಷಕ್ಕಿಂತ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಏರಿಕೆಯಾಗುತ್ತಿರುವ ಮಾಲಿನ್ಯದ ಬಗ್ಗೆ ಆತಂಕಗೊಂಡಿರುವ ಕೇಂದ್ರ ಸರ್ಕಾರ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸಂಚಾರ ಸಾರಿಗೆಯಾಗಿ ವಿದ್ಯುತ್ ಚಾಲಿತ ವಾಹನಗಳನ್ನು ಪ್ರಚುರಪಡಿಸಲು ಮುಂದಾಗಿದೆ. ಹೆಚ್ಚು ಜನಸಂಖ್ಯೆಯಿರುವ ನಗರಗಳಿಗೆ ಮಾಲಿನ್ಯ ರಹಿತ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು 105 ಕೋಟಿ ರೂಪಾಯಿ ಸಬ್ಸಿಡಿ ದೊರೆಯಲಿದೆ.
ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ಬಸ್ಸುಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸುವುದನ್ನು ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಸಚಿವಾಲಯ ಎದುರು ನೋಡುತ್ತಿದೆ. ನಗರ ಪ್ರದೇಶಗಳಲ್ಲಿ ಏರಿಕೆಯಾಗುತ್ತಿರುವ ಮಾಲಿನ್ಯ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಚಾಲಿತ ವಾಹನವನ್ನು ಹೆಚ್ಚು ಪ್ರಚಾರ ಮಾಡಲು ಮುಖ್ಯ ಕಾರಣವಾಗಿದೆ. ವಿದ್ಯುತ್ ಚಾಲಿತ ಬಸ್ಸುಗಳ ಜೊತೆಗೆ ನಾಲ್ಕು ಚಕ್ರದ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಮೂರು ಚಕ್ರದ ವಾಹನಗಳಿಗೆ ಬೇಡಿಕೆಗಳು ಹೆಚ್ಚಿ ಬಳಕೆಗೆ ಪ್ರೋತ್ಸಾಹಿಸಲಾಗುವುದು ಎಂದು ಸಚಿವಾಲಯದ ಅಧಿಕಾರಿಗಳು ಹೇಳುತ್ತಾರೆ.
ಒಟ್ಟು 105 ಕೋಟಿ ರೂಪಾಯಿ ಹಣದಲ್ಲಿ ಎಲೆಕ್ಟ್ರಿಕ್ ಪ್ರಯಾಣಿಕ ಕಾರುಗಳು ಮತ್ತು ಎಲೆಕ್ಟ್ರಿಕ್ ಮೂರು ಚಕ್ರದ ವಾಹನಗಳಿಗೆ ಸಬ್ಸಿಡಿಯನ್ನು ವಾಹನಗಳನ್ನು ವಿತರಿಸುವ ಸಂದರ್ಭದಲ್ಲಿ ನೀಡಲಾಗುತ್ತದೆ. ಬಸ್ಸುಗಳಿಗೆ ಸಬ್ಸಿಡಿಯನ್ನು ಭಾಗ ಭಾಗವಾಗಿ ಬಿಡುಗಡೆ ಮಾಡಲಾಗುತ್ತದೆ. 105 ಕೋಟಿ ಜೊತೆಗೆ ವಾಹನಗಳಿಗೆ ವಿದ್ಯುತ್ ತುಂಬಿಸಲು 15 ಕೋಟಿ ರೂಪಾಯಿ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳುತ್ತಾರೆ.
ಉತ್ತಮ ಹಸಿರು ಪರಿಸರಕ್ಕಾಗಿ ಭಾರತೀಯ ಯೋಜನೆಯಲ್ಲಿ ವಿದ್ಯುತ್ ಚಾಲಿತ ವಾಹನಗಳಲ್ಲಿ ಫಾಸ್ಟರ್ ಅಡಾಪ್ಷನ್ ಅಂಡ್ ಮ್ಯಾನುಫ್ಯಾಕ್ಚರಿಂಗ್ (ಹೈಬ್ರಿಡ್) ನ್ನು 2015, ಏಪ್ರಿಲ್ 1ರಂದು ಜಾರಿಗೆ ತರಲಾಗಿತ್ತು. ವಿದ್ಯುತ್ ಚಾಲಿತ ವಾಹನಗಳನ್ನು ಪ್ರಚುರಪಡಿಸುವುದು ಇದರ ಉದ್ದೇಶವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com