ಇದರಿಂದ ತೀವ್ರ ರಾಗಮೋನಿಕಾ ಅವಮಾನಕ್ಕೊಳಗಾಗಿದ್ದಳು. ಅಲ್ಲದೆ, ತೀವ್ರ ಮನನೊಂದು ಸಂಜೆ ಹಾಸ್ಟೆಲ್'ನ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದರಿಂದ ಆಕ್ರೋಶಗೊಂಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಒಳಗಿನ ವಸ್ತುಗಳಿಗೆ ಬೆಂಚಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯದ ಸಿಬ್ಬಂದಿಗಳು ಆಕೆಗೆ ಅವಮಾನ ಮಾಡಿದ್ದರಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪಿಸುತ್ತಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಯಿಂದಾಗಿ ವಿಶ್ವವಿದ್ಯಾಲಯದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.