ಚಳಿಗಾಲದ ಅಧಿವೇಶನ ವಿಳಂಬ: ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಮನವಿ

ಆದಷ್ಟು ಬೇಗ ಚಳಿಗಾಲದ ಅಧಿವೇಶನ ಕರೆಯುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಗುರುವಾರ ರಾಷ್ಟ್ರಪತಿ ರಾಮನಾಥ್....
ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನಾಯಕರು
ನವದೆಹಲಿ: ಆದಷ್ಟು ಬೇಗ ಚಳಿಗಾಲದ ಅಧಿವೇಶನ ಕರೆಯುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದೆ.
ಈ ಸಂಬಂಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕರು, ಸರ್ಕಾರ ಸೂಕ್ತ ಕಾರಣ ನೀಡದೆ ಚಳಿಗಾಲದ ಅಧಿವೇಶನ ವಿಳಂಬ ಮಾಡುತ್ತಿದೆ ಎಂದು ದೂರಿದ್ದಾರೆ.
ಚಳಿಗಾಲದ ಅಧಿವೇಶನ ವಿಳಂಬಕ್ಕೆ ಸರ್ಕಾರ ಗುಜರಾತ್ ವಿಧಾನಸಭೆ ಚುನಾವಣೆಯನ್ನು ಅನೌಪಚಾರಿಕವಾಗಿ ನೀಡುತ್ತಿದೆ. ಚುನಾವಣೆ ನಿಗದಿ ಮಾಡುವುದು ಚುನಾವಣಾ ಆಯೋಗ. ಆದರೆ ಸ್ಥಾಪಿತ ಸರ್ಕಾರ ನಿಗದಿಯಂತೆ ಸಂಸತ್ ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ಸಂಸದೀಯ ಪಕ್ಷ ಮನವಿ ಮಾಡಿದೆ. 
ಕಾಂಗ್ರೆಸ್ ಸಂಸದೀಯ ಪಕ್ಷ ನವೆಂಬರ್ 21ರಂದು ರಾಷ್ಟ್ರಪತಿಗಳಿಗೆ ಬರೆದ ಈ ಪತ್ರದಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಹಾಗೂ ಆನಂದ್ ಶರ್ಮಾ ಅವರು ಸಹಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನ ನಡೆಸುತ್ತಿಲ್ಲ ಎಂದು ಪ್ರತಿಪಕ್ಷಗಳು ಭಾರಿ ಹುಯಿಲೆಬ್ಬಿಸುತ್ತಿದ್ದು, ಗುಜರಾತ್‌ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ಬಳಿಕ ಡಿ. 15ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. 
ನಿನ್ನೆ ಗೃಹ ಸಚಿವ ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜನವರಿ 5ರವರೆಗೆ ಅಧಿವೇಶನ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಅಧಿವೇಶನವು ಬಿಜೆಪಿಯ ಸಾಧ್ಯತೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಭಯದಿಂದ ಸರ್ಕಾರ ಅಧಿವೇಶನ ಮುಂದೂಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com