ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಮೋದಿ ಸರ್ಕಾರ ಚಳಿಗಾಲ ಅಧಿವೇಶನ ಮುಂದೂಡಿದೆ: ರಾಹುಲ್ ಗಾಂಧಿ

ಗುಜರಾತ್ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಸಂಸತ್ತಿನ ಚಳಿಗಾಲ ಅಧಿವೇಶನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಮುಂದೂಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ದಾಹೆಗಮ್: ಗುಜರಾತ್ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಸಂಸತ್ತಿನ ಚಳಿಗಾಲ ಅಧಿವೇಶನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಮುಂದೂಡಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಪ್ರತೀ ವರ್ಷ ಸಂಸತ್ತಿನ ಅಧಿವೇಶನವನ್ನು ನವೆಂಬರ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ 1 ತಿಂಗಳ ಕಾಲ ಚರ್ಚೆ ನಡೆಸಲಾಗುತ್ತದೆ. ಆದರೆ, ಈ ವರ್ಷ ಗುಜರಾತ್ ರಾಜ್ಯ ಚುನಾವಣೆ ಪೂರ್ಣಗೊಂಡ ಬಳಿಕ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಧಿವೇಶನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಡಿಸೆಂಬರೇ 5 ರಿಂದ ಜನವರಿ 5 ರ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಘೋಷಣೆ ಮಾಡಿದ್ದು, 14 ದಿನಗಳ ಕಾಲ ಸಂಸತ್ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com