2022ರೊಳಗೆ ದೇಶದಲ್ಲಿ ಅಪೌಷ್ಟಿಕತೆ ತಗ್ಗಿಸಲು ಕ್ರಮ: ಪ್ರಧಾನಿ ಮೋದಿ

ಭಾರತದಲ್ಲಿ ಪೌಷ್ಠಿಕಾಂಶ ಮತ್ತು ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ತೆಗೆದುಕೊಳ್ಳಬೇಕಾದ ...
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ಭಾರತದಲ್ಲಿ ಪೌಷ್ಠಿಕಾಂಶ ಮತ್ತು ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಅಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದರು.
ದೆಹಲಿಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಸಚಿವಾಲಯ, ನೀತಿ ಆಯೋಗ ಮತ್ತು ಇತರ ಸಚಿವಾಲಯದ ಅಧಿಕಾರಿಗಳು ಭಾಗವಹಿಸಿದ್ದಾರೆ. ಅಪೌಷ್ಟಿಕತೆಯ ಪ್ರಸ್ತುತ ಸ್ಥಿತಿ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪರಾಮರ್ಶೆ ನಡೆಸಲಾಯಿತು.
ಈ ಬಗ್ಗೆ ಹೇಳಿಕೆ ಹೊರಡಿಸಿರುವ ಪ್ರಧಾನ ಮಂತ್ರಿ ಸಚಿವಾಲಯ, 2022ರೊಳಗೆ ದೇಶದಲ್ಲಿ ಪೌಷ್ಟಿಕಾಂಶ ಸಮಸ್ಯೆಯಲ್ಲಿ ಬದಲಾವಣೆ ತರುವ ಅಗತ್ಯವನ್ನು ಸಭೆಯಲ್ಲಿ ಒತ್ತಿ ಹೇಳಿದ್ದಾರೆ ಎಂದಿದೆ.
ಮಕ್ಕಳಲ್ಲಿ ಕಡಿಮೆ ಪೋಷಣೆ, ಕಡಿಮೆ ಜನನ ತೂಕ ಮತ್ತು ರಕ್ತಹೀನತೆಯನ್ನು ತಗ್ಗಿಸಲು ಆ ನಿಟ್ಟಿನಲ್ಲಿ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಿ ಸಭೆಯಲ್ಲಿ ತಿಳಿಸಿದರು. 2022ರೊಳಗೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾಗುವ ಸಂದರ್ಭದಲ್ಲಿ ಇದರ ಫಲಿತಾಂಶವನ್ನು ನಾವು ಕಾಣಬೇಕು ಎಂಬುದನ್ನು ಪ್ರಧಾನಿ ಮೋದಿ ಸಭೆಯಲ್ಲಿ ಹೇಳಿದ್ದಾರೆ ಎಂದು ಸಚಿವಾಲಯದ ಅಧಿಕೃತ ಹೇಳಿಕೆ ತಿಳಿಸಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಒಗ್ಗೂಡಿಸಲು ಕರೆ ನೀಡಿದ ಪ್ರಧಾನಿ, ಇದು ಪೋಷಕಾಂಶಗಳ ಕೊರತೆ ತಡೆಗಟ್ಟುವಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com