ಘಟನೆಯನ್ನು ತಕ್ಷಣವೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಕಾಶ್ ದೀಪ್ ಅವರ ಗಮನಕ್ಕೆ ತರಲಾಗಿದ್ದು, ಭಯೋತ್ಪಾದಕನ ಬಿಡುಗಡೆಯ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದವರನ್ನು ಬಂಧಿಸಲು ಬಂದಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ಮತ್ತೊಂದು ಗುಂಪು ಸ್ಥಳದಲ್ಲಿ ಜಮಾವಣೆಯಾಗಲು ಪ್ರಾರಂಭವಾಯಿತು. ಆದರೆ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕೆ ಅಗತ್ಯವಿದ್ದ ಕ್ರಮಗಳನ್ನು ಕೈಗೊಳ್ಳುವುದಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಆಕಾಶ್ ದೀಪ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.