ಗಲ್ಲು ಶಿಕ್ಷೆ
ದೇಶ
ಮಧ್ಯಪ್ರದೇಶದಲ್ಲಿ ರೇಪಿಸ್ಟ್‌ಗಳಿಗೆ ಗಲ್ಲು ಶಿಕ್ಷೆ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರದಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ...
ಭೋಪಾಲ್: ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರದಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಣ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಹತ್ವದ ತೀರ್ಮಾನವನ್ನು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಮಧ್ಯಪ್ರದೇಶದಲ್ಲಿ ಅತ್ಯಾಚಾರ ವೆಸಗಿದ ದುಷ್ಕರ್ಮಿಗಳು ಗಲ್ಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರಮುಖವಾಗಿ 12 ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಮುಗ್ಧ ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಈ ನಿರ್ಧಾರ ಅನ್ವಯವಾಗಲಿದೆ.
ನವೆಂಬರ್ 5ರಂದು 12 ವರ್ಷದ ಬಾಲಕಿಯೊರ್ವಳ ಮೇಲೆ ಕೆಲ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಆಕೆಯ ಸಾವಿಗೆ ಕಾರಣವಾಗಿದ್ದವರಿಗೂ ಗಲ್ಲು ಶಿಕ್ಷೆ ವಿಧಿಸುವ ತೀರ್ಮಾನವನ್ನು ಕೂಡ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಕಳೆದ ತಿಂಗಳು ನಡೆದ ಐಎಎಸ್ ಆಕಾಂಕ್ಷಿ ಮೇಲೆ ಅತ್ಯಾಚಾರ, ವಿಶೇಷ ಚೇತನ ಬಾಲಿಕ ಮೇಲೆ ನಡೆದಿರುವ ದುಷ್ಕತ್ಯದ ಆರೋಪಿಗಳಿಗೆ ಈ ಶಿಕ್ಷೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ