ನವದೆಹಲಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಬಿಡುಗಡೆಗೆ ಅಮೆರಿಕ ನಂತರ ಈಗ ಫ್ರಾನ್ಸ್ ಸಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ವಿಶ್ವ ಸಂಸ್ಥೆ ನಿಷೇಧಿಸಿರುವ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಬಿಡುಗಡೆಗೆ ಸಂಬಂಧಿಸಿದಂತೆ ಪ್ಯಾರಿಸ್ ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ ಫ್ರಾನ್ಸ್ ರಾಜತಾಂತ್ರಿಕ ಮೂಲಗಳು ತಿಳಿಸಿವೆ.
ಭಾರತ ಮತ್ತು ಫ್ರಾನ್ಸ್ ಜಂಟಿಯಾಗಿ ಭಯೋತ್ಪಾನೆ ವಿರುದ್ಧದ ಹೋರಾಟವನ್ನು ಮುಂದುವರೆಸಲಿವೆ ಎಂದು ಅವರು ಹೇಳಿದ್ದಾರೆ.
ಕಳೆದ ಶನಿವಾರ ಹಫೀಜ್ ಸಯೀದ್ ಬಿಡುಗಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಅಮೆರಿಕ, ಸಯೀದ್ ನನ್ನು ಈ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚನೆ ನೀಡಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ತೀವ್ರ ಮುಖಭಂಗಕ್ಕೀಡಾಗಿದೆ.