ದೇಶ

ಗುಜರಾತ್ ಚುನಾವಣೆ: ಕಾಂಗ್ರಸ್ ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ 15 ಅಭ್ಯರ್ಥಿಗಳನ್ನೊಳಗೊಂಡ ಅಂತಿಮ ಪಟ್ಟಿಯನ್ನು....

ಗುಜರಾತ್ ಚುನಾವಣೆ: ಕಾಂಗ್ರಸ್ ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ 15 ಅಭ್ಯರ್ಥಿಗಳನ್ನೊಳಗೊಂಡ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಇಂದು ಪತ್ರಿಕಾ ಪ್ರಕಟಣೆಯಲ್ಲಿ 15 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದು, ಎರಡು ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.
ಕಳೆದ ಭಾನುವಾರ ಕಾಂಗ್ರೆಸ್ 76 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅಲ್ಲದೆ ಇದಕ್ಕು ಮುನ್ನ ನವೆಂಬರ್ 21ರಂದು 13 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪಕ್ಷ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಬಿಡುಗಡೆ ಮಾಡಿದ್ದರು.
ಗುಜರಾತ್ 182 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 9 ಮೊದಲ ಹಂತದ ಮತದಾನ ಹಾಗೂ ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 18ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.