ನವದೆಹಲಿ: ಹಿಂಸೆಯ ವ್ಯಾಖ್ಯಾನ ಹಾಗೂ ತಡೆ ಕಾನೂನನ್ನು ಜಾರಿಗೆ ತರಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಕೇಂದ್ರ ಕಾನೂನು ಸಚಿವ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. 2016 ರಲ್ಲಿ ಸಲ್ಲಿಸಲಾದ ರಿಟ್ ಅರ್ಜಿಯಲ್ಲಿ, ಕುಮಾರ್ ಅವರು ಹಿಂಸೆಯನ್ನು ತಡೆಗಟ್ಟಲು ಶಾಸಕಾಂಗ ಕಾನೂನನ್ನು ಜಾರಿಗೆ ತರಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ ಎಚ್ ಆರ್ ಸಿ) ಗೆ ನಿರ್ದೇಶಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಒತ್ತಾಯಿಸಿದ್ದರು.