ವಿಶ್ವಸಂಸ್ಥೆಯ ಜಾಗತಿಕ ಉಗ್ರರ ಪಟ್ಟಿಯಲ್ಲಿ ಹಫೀಜ್ ಸಯೀದ್ ಹೆಸರಿದ್ದು, ಆ ಪಟ್ಟಿಯಿಂದ ತನ್ನ ಹೆಸರನ್ನು ಕೈಬಿಡುವಂತೆ ವಿಶ್ವಸಂಸ್ಥೆಗೆ ಹಫೀಜ್ ಸಯೀದ್ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿದ್ದಾನೆ. ಗೃಹ ಬಂಧನದಲ್ಲಿರುವಾಗಲೇ ಲಾಹೋರ್ ಮೂಲದ ಸಂಸ್ಥೆಯ ಮೂಲಕ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾನೆ. 2008 ರ ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದ ಮೂಲಕ ಹಫೀಜ್ ಸಯೀದ್ ಹೆಸರನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲಾಗಿತ್ತು.