ಹೈದರಾಬಾದ್: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಮಹಿಳಾ ಉದ್ಯಮಿಗಳಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಮುತ್ತಿನಗರಿಯಲ್ಲಿ ಅಮೆರಿಕ ಸಹಭಾಗಿತ್ವದಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯಾದ ಮೊದಲ ಜಾಗತಿಕ ಉದ್ಯಮಶೀಲತಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು ಈ ಶೃಂಗಸಭೆಯ ಸಹ-ನಿರೂಪಕರಾದ ಇವಾಂಕ್ ಟ್ರಂಪ್ ಗೆ ಧನ್ಯವಾದ ಹೇಳಲು ನಾನು ಬಯಸುತ್ತೇನೆ ಎಂದರು.
ಇಂದಿನ ಯುವಜನತೆಯನ್ನು ಪ್ರೋತ್ಸಾಹಿಸುವ ಒಂದು ಉದ್ಯಮಶೀಲತೆಯ ಶಕ್ತಿಯನ್ನು ಇವಾಂಕಾ ಅವರು ಪ್ರತಿನಿಧಿಸುತ್ತಿದ್ದಾರೆ. ಅವರ ಅಸ್ವಿತ್ವವು ಭಾರತ ಮತ್ತು ವಿಶ್ವದಾಂದ್ಯತ ಮಹಿಳಾ ಉದ್ಯಮಿಗಳಿಗೆ ಸ್ಫೂರ್ತಿ ನೀಡುವುದೆಂದು ನನಗೆ ಖಾತ್ರಿಯಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದಲ್ಲಿ ಭಾರತ ಮತ್ತು ಅಮೆರಿಕ ಸಂಬಂಧಗಳು ಇನ್ನಷ್ಟು ಗಟ್ಟಿಯಾಗಲಿವೆ. ಇವರಿಬ್ಬರ ನೇತೃತ್ವವು ಜಾಗತಿಕ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ನನಗೆ ಯಾವುದೇ ಸಂದೇಹವಿಲ್ಲ ಎಂದರು.