ನವದೆಹಲಿ: ಮಹಿಳೆಯೊಬ್ಬರು ಏರ್ ಇಂಡಿಯಾ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದೆಹಲಿಯಿಂದ ಅಹಮದಾಬಾದ್ ಗೆ ತೆರಳುತ್ತಿದ್ದ ಮಹಿಳೆ ಟಿಕೆಟ್ ವಿಷಯವಾಗಿ ಏರ್ ಇಂಡಿಯಾ ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ್ದು, ಈ ವೇಳೆ ಸಿಬ್ಬಂದಿಗಳಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದೆ.