ಕೊಪಾರ್ಡಿ 'ಹತ್ಯಾಚಾರ' ಪ್ರಕರಣ: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

Published On :
ಅಹ್ಮದ್ ನಗರ: ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಮಹಾರಾಷ್ಟ್ರದ ಕೊಪಾರ್ಡಿ ಹತ್ಯಾಚಾರ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಪ್ರಕರಣ ಮೂವರು ಅಪರಾಧಿಗಳಿಗೆ ಅಹ್ಮದ್ ನಗರ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಅಂದರೆ ನವೆಂಬರ್ 18ರಂದು ಪ್ರಕರಣದ ಮೂವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದ ನ್ಯಾಯಾಲಯ ಇಂದು ಅಂದರೆ ನವೆಂಬರ್ 29ರಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡುವುದಾಗಿ ಹೇಳಿತ್ತು. ಇದೀಗ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಮೂವರು ಆಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಮೂವರು ಅಪರಾಧಿಗಳಿಗೆ ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮರಣ ದಂಡನೆಯ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದು, ಹೆಚ್ಚುವರಿ ವಿಶೇಷ ನ್ಯಾಯಾಧೀಶರಾದ ಸುವರ್ಣ ಕೇವಳೆ ಅವರು, ಅಪರಾಧಿಗಳಾದ ಜಿತೇಂದ್ರ ಬಾಬುಲಾಲ್ ಶಿಂಧೆ, ಸಂತೋಷ್ ಗೋರಖ್ ಭವಾಲ್ ಮತ್ತು ನಿತಿನ್ ಗೋಪೀನಾಥ್ ಭೈಲುಮೆ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.
2016ರಲ್ಲಿ ಮಹಾರಾಷ್ಟ್ರದ ಕೊಪಾರ್ಡಿ ಗ್ರಾಮದಲ್ಲಿ 15ರ ಹರೆಯದ ಬಾಲಕಿಯ ಮೇಲೆ ಅತ್ಯಮಾನುಷ ರೀತಿಯಲ್ಲಿ ಅತ್ಯಾಚಾರವೆಸಗಿ ಆಕೆಯನ್ನು ಭೀಕರವಾಗಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಸಂಬಂಧ ಮಹಾರಾಷ್ಟ್ರದಲ್ಲಿ ವ್ಯಾಪಕ ಪ್ರತಿಭಟನೆ ಭುಗಿಲೆದ್ದಿತ್ತು. ಮರಾಠ ಸಮುದಾಯದವರು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗೆ ಇಳಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mumbaiಮುಂಬೈಮಹಾರಾಷ್ಟ್ರMaharashtraKopardi rape and murderAhmednagar Courtಕೊಪಾರ್ಡಿ ಹತ್ಯಾಚಾರಅಹ್ಮದ್ ನಗರ ಕೋರ್ಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


