ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕಾಲಿಕ ಮರಣದಿಂದ ತೆರವಾಗಿರುವ ಆರ್.ಕೆ.ನಗರ ವಿಧಾನಸಭಾ ಉಪಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗ ಪ್ರಕಟಿಸಿದೆ. ಡಿ.31ರ ಒಳಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು. ಅದರಂತೆ, ಉಪಚುನಾವಣೆಗೆ ಡಿ.21ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು. ಡಿ.24ರಂದು ಮತ ಎಣಿಕೆ ನಡೆಯಲಿದೆ. ಡಿ.4 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.5 ರಿಂದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಡಿ.7 ಕೊನೆಯ ದಿನವಾಗಿದೆ.