ಪ್ರಮುಖವಾಗಿ ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಗಂಟೆಗೆ ಸುಮಾರು 150 ಕಿ.ಮೀ ವೇಗದಲ್ಲಿ ಒಕ್ಹಿ ಚಂಡಮಾರುತ ಲಕ್ಷ ದ್ವೀಪದತ್ತ ಧಾವಿಸುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಅಂತೆಯೇ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನೂ ಕೂಡ ರವಾನಿಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಹಲವೆಡೆ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಹೇಳಿದ್ದು, ಈಗಾಗಲೇ ತಮಿಳುನಾಡಿನ ತೂತುಕುಡಿ, ಟುಟಿಕಾರನ್, ತಿರುನೆಲ್ವೇಲಿ, ಕನ್ಯಾಕುಮಾರಿ, ವಿರುದುನಗರ್ ಗಳಲ್ಲಿ ಭಾರಿ ಮಳೆಯಾಗುತ್ತಿದೆ.