ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಯೋಧರು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಯೋಧರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಉಗ್ರರು ಹತರಾಗಿದ್ದಾರೆ.
ಭಾರತೀಯ ಸೇನಾಪಡೆ, ಸಿಆರ್'ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ.