ಜಮ್ಮು-ಕಾಶ್ಮೀರ: ಬುದ್ಗಾಮ್'ನಲ್ಲಿ ಉಗ್ರರ ವಿರುದ್ಧ ಸೇನಾಪಡೆ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ...
ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
ಪಾಕಿಸ್ತಾನ ಮೂಲಕ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿ ಕುಳಿತಿದ್ದು, ಉಗ್ರರನನು ಸದೆಬಡಿಸಲು ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದೆ ಎಂದು ವರದಿಗಳು ತಿಳಿಸಿವೆ.
ಭಾರತೀಯ ಸೇನಾಪಡೆ, ಸಿಆರ್'ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.