ಚೆನ್ನೈ ಮತ್ತು ಕೋಲ್ಕತಾ ನಗರಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇಡಿ ಮೂಲಗಳ ಪ್ರಕಾರ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಕೇಳಿಬಂದಿರುವ ಹವಾಲಾ ದಂಧೆ ಪ್ರಕರಣ ಹಾಗೂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ನಾಲ್ಕು ಪ್ರದೇಶಗಳು ಮತ್ತು ಕೋಲ್ಕತಾದ 2 ಪ್ರದೇಶಗಳಲ್ಲಿ ಅಧಿಕಾರಿಗಳು ನಡೆಸಿದ್ದು, ಈ ವೇಳೆ ಹಲವು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.