ನವದೆಹಲಿ: ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಕರಡು ಮಸೂದೆಯನ್ನು ಸಿದ್ಧಪಡಿಸಿದ್ದು, ಅದರಲ್ಲಿ ತಲಾಖ್ ನೀಡುವ ಪುರುಷರಿಗೆ ದಂಡ, ಮೂರು ವರ್ಷ ಜೈಲು ಶಿಕ್ಷೆ ಹಾಗೂ ಮಹಿಳೆಯರಿಗೆ ಪರಿಹಾರ ನೀಡಲು ಅವಕಾಶವಿದೆ.