ನವದೆಹಲಿ: ಚೀನಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ 17 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಜಯಿಸಿಕೊಟ್ಟ ಮಾನುಷಿ ಛಿಲ್ಲರ್ ಈ ಸಾಲಿನ ವಿಶೇಷ ಸಾಧನೆಗಾಗಿ ವರ್ಷದ ಭಾರತೀಯ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ, ಮಾನುಷಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವ ಅರುಣ್ ಜೇಟ್ಲಿ ಸಹ ಭಾಗವಹಿಸಿದ್ದರು.
ಪ್ರಶಸ್ತಿ ಸ್ವೀಕರಿಸಿದ ಮಾನುಷಿ, ಪ್ರಶಸ್ತಿ ನೀಡಿ ಗೌರವಿಸಿರುವುದಕ್ಕೆ ಧನ್ಯವಾದ ಹೇಳಿದ್ದಾರೆ.ಟೀಮ್ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಸಹ ವಿಶ್ವ ಸುಂದರಿ ಮಾನುಷಿ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಮಾನುಷಿ ಛಿಲ್ಲರ್ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ ಭಾರತೀಯರ ಪೈಕಿ ಆರನೆಯವರಾಗಿದ್ದು 17 ವರ್ಷಗಳ ಬಳಿಕ ಭಾರತಕ್ಕೆ ಈ ಪುರಸ್ಕಾರ ದಕ್ಕಿಸಿಕೊಟ್ಟ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ.