ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಭರ್ಜರಿ ಗೆಲುವು, ರಾಹುಲ್ ಕ್ಷೇತ್ರದಲ್ಲೇ ಕೈಗೆ ಮುಖಭಂಗ

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ....
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಷೇತ್ರ ಅಮೆಥಿಯಲ್ಲೇ 'ಕೈ'ಗೆ ಮಖಭಂಗವಾಗಿದೆ.
ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಏಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಕೇಸರಿ ಪಕ್ಷ ಮುನ್ನಡೆ ಸಾಧಿಸಿದೆ. ಈ ಫಲಿತಾಂಶ ಯೋಗಿ ಸರಕಾರಕ್ಕೆ ನೀಡಿರುವ ಜನಾದೇಶವೆಂದು ಪರಿಗಣಿಸಲಾಗುತ್ತಿದೆ.
ಕಾಂಗ್ರೆಸ್ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟ,ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ಅಮೇಥಿಯಲ್ಲಿಯೂ ಕಾಂಗ್ರೆಸ್‌ ಮುಖಭಂಗ ಅನುಭವಿಸಿದ್ದು.ಅಮೇಥಿ ನಗರ ಪಂಚಾಯತಿ ಚುನಾವಣೆಯಲ್ಲಿ ಸೋಲು ಅನುಭವಿಸಿದೆ. ಸಮಾಜವಾದಿ ಪಕ್ಷವೂ ಈ ಚುನಾವಣೆಯಲ್ಲಿ ತನ್ನ ಅಸ್ತಿತ್ವ ತೋರುವಲ್ಲಿ ವಿಫಲವಾಗಿದೆ.
ರಾಜ್ಯದ 16 ಮಹಾನಗರ ಪಾಲಿಕೆಗಳ ಪೈಕಿ 13ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಅಧಿಕಾರ ಹಿಡಿಯುವಎಲ್ಲಾ  ಸಾಧ್ಯತೆಗಳಿವೆ. ಇನ್ನು ಪ್ರತಿಪಕ್ಷ ಬಿಎಸ್‌ಪಿ 3 ಪಾಲಿಕೆಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಪ್ರಧಾನಿ ಮೋದಿ ಅವರು ಪ್ರತಿನಿಧಿಸುತ್ತಿರುವ ವಾರಣಾಸಿ , ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಗೋರಖ್‌ಪುರದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು ಅಧಿಕಾರ ಹಿಡಿಯುವುದು ಖಚಿತವಾಗಿದೆ. 
198 ನಗರ ಸಭೆಗಳ ಪೈಕಿ  ಬಿಜೆಪಿ 79 ರಲ್ಲಿ ಮುನ್ನಡೆ ಸಾಧಿಸಿದ್ದು, ಬಿಎಸ್‌ಪಿ 41 , ಎಸ್‌ಪಿ  47 , ಕಾಂಗ್ರೆಸ್‌ 11 ಮತ್ತು ಇತರರು 20 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com