ಗಾಂಧಿ ಜಯಂತಿ: ಬಾಪೂ ಅವರ ಆದರ್ಶಗಳು ವಿಶ್ವದ ಕೋಟ್ಯಾಂತರ ಜನರಿಗೆ ಪ್ರೇರಣೆ- ಪ್ರಧಾನಿ ಮೋದಿ

ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಾಪೂ ಹಾಗೂ ಶಾಸ್ತ್ರಿಯವರ ಸ್ಮಾರಕಕ್ಕೆ ಸೋಮವಾರ ಪುಷ್ಪನಮನ ಸಲ್ಲಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಾಪೂ ಹಾಗೂ ಶಾಸ್ತ್ರಿಯವರ ಸ್ಮಾರಕಕ್ಕೆ ಸೋಮವಾರ ಪುಷ್ಪನಮನ ಸಲ್ಲಿಸಿದರು.

ನವದೆಹಲಿ: ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ ಹಾಗೂ ಶಾಸ್ತ್ರಿಯವರ ಸ್ಮಾರಕಕ್ಕೆ ಸೋಮವಾರ ಪುಷ್ಪನಮನ ಸಲ್ಲಿಸಿದರು. 

ಇಂದು ಬೆಳಿಗ್ಗೆ ರಾಜ್'ಘಾಟ್'ಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾದಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ವರಿಷ್ಠ ಎಲ್.ಕೆ. ಅಡ್ವಾಣಿಯವರು ಸೇರಿದಂತೆ ಇನ್ನಿತರೆ ಗಣ್ಯಾತಿಗಣ್ಯರು ಕೂಡ ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನ ಅರ್ಪಿಸಿದರು. 

ದೇಶ ಕಂಡ ಧೀರ ನಾಯಕ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದ್ದು, ವಿಜಯ್ ಘಾಟ್ ನಲ್ಲಿ ಶಾಸ್ತ್ರಿಯವರ ಸ್ಮಾರಕ್ಕೂ ರಾಷ್ಚ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಇನ್ನಿತರೆ ಗಣ್ಯರು ಭೇಟಿ ಕೊಟ್ಟು, ಪುಷ್ಪನಮನ ಸಲ್ಲಿಸಿದರು. 
ಗಾಂಧಿ ಜಯಂತಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರು, ಗಾಂಧಿ ಜಯಂತಿ ಹಿನ್ನಲೆಯಲ್ಲಿ ಪ್ರೀತಿಯ ಬಾಪು ಅವರಿಗೆ ನಾನು ತಲೆಬಾಗುತ್ತೇನೆ. ಅವರ ಆದರ್ಶಗಳು ವಿಶ್ವದ ಕೋಟ್ಯಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ. 

ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಶಾಸ್ತ್ರಿಯವರು ಭಾಷಣ ಮಾಡಿರುವ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡು ಶಾಸ್ತ್ರಿಯವರಿಗೆ ನಮನಗಳನ್ನು ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com