ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 10 ವರ್ಷದ ಬಾಲಕನ ಸಾವು, ಐವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಪಾಕಿಸ್ತಾನದ ಪಡೆಗಳು ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿವೆ,.
ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 10 ವರ್ಷದ ಬಾಲಕನ ಸಾವು,
ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 10 ವರ್ಷದ ಬಾಲಕನ ಸಾವು,
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಪಾಕಿಸ್ತಾನದ ಪಡೆಗಳು ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿವೆ, ಈ ವೇಳೆ 10 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಇತರೆ ಐವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 ಪಾಕಿಸ್ತಾನ ಪಡೆಗಳ ಗುಂಡಿನ ದಾಳಿಗೆ ಭಾರತೀಯ ಸೇನೆಗಳು ಸಹ ತಕ್ಕ ಪ್ರತ್ಯುತ್ತರ ನೀಡುತ್ತಿರುವುದಾಗಿ ವರದಿಯಾಗಿದೆ.
ಪಾಕಿಸ್ತಾನಿ ಪಡೆಗಳು ಶಹಪುರ್, ಕಿರ್ನಿ ಮತ್ತು ಖಸ್ಬಾ ವಲಯದ ಹಳ್ಳಿ ಮತ್ತು ಸೇನಾ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮೃತಪಟ್ಟ ಹುಡುಗನನ್ನು ಕರ್ನಿ ವಲಯದ ಇಸ್ರಾರ್ ಅಹಮ್ಮದ್ ಎಂದು ಗುರುತಿಸಲಾಗಿದೆ.
ಇಂದು ಬೆಳೆಗ್ಗೆ 6:50 ರ ಸುಮಾರಿಗೆ ಈ ಗುಂಡಿನ ಕಾಳಗ ಪ್ರಾರಂಭಗೊಂಡಿದೆ ಎಂದು ಗಡಿ ಯಲ್ಲಿನ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ಗಾಯಗೊಂಡ ನಾಗರಿಕರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com