ಭಯೋತ್ಪಾದನೆ ಯಾವುದಕ್ಕೂ ಉತ್ತರವಲ್ಲ: ಪಾಕ್ ವಿರುದ್ಧ ಮಧ್ಯಪ್ರದೇಶ ಸಿಎಂ ಕಿಡಿ

ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಕಿಸ್ತಾನದ ವಿರುದ್ಧ ಸೋಮವಾರ...
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್: ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಕಿಸ್ತಾನದ ವಿರುದ್ಧ ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಪಾಕಿಸ್ತಾನ ಸೇನೆ ಪದೇ ಪದೇ ಕದನ ಉಲ್ಲಂಘನೆ ಮಾಡುತ್ತಿದೆ. ದೇಶದಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಗಾಂಧಿ ಜಯಂತಿಯನ್ನು ಜಾಗತಿಕವಾಗಿ ಅಹಿಂಸಾತ್ಮಕ ದಿನವೆಂದು ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿಯೇ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿರುವುದು ನಾಚಿಕೆಗೇಡಿನ ವರ್ತನೆಯಾಗಿದೆ ಎಂದು ಹೇಳಿದ್ದಾರೆ. 
ಭಯೋತ್ಪಾದನೆ ಯಾವುದಕ್ಕೂ ಉತ್ತರವಾಗಲು ಸಾಧ್ಯವಿಲ್ಲ. ಈ ಪಾಠವನ್ನು ಪಾಕಿಸ್ತಾನ ಅರಿಯಬೇಕಿದೆ. ಗಾಂಧಿ ಜಯಂತಿ ಅಹಿಂಸಾತ್ಮಕ ದಿನವಾಗಿದೆ. ಕದನ ವಿರಾಮದಂತಹ ಘಟನೆಗಳು ಮಾನವತೆಗೆ ನಾಚಿಕೆಗೇಡು. ಪಾಕಿಸ್ತಾನದಲ್ಲಿ ಶಾಂತಿಗೆ ಜಾಗವಿಲ್ಲ. ಪಾಕಿಸ್ತಾನ ಭಯೋತ್ಪಾದನೆಯನ್ನು ಪಸರಿಸುತ್ತಿದ್ದು, ಎಲ್ಲೆಲ್ಲೂ ರಕ್ತಪಾತವನ್ನು ಹರಡುತ್ತಿದ್ದಾರೆ. ಪಾಕಿಸ್ತಾನದ ಈ ವರ್ತನೆಯನ್ನು ನಾನು ಖಂಡಿಸುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com